ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯದ ಹೋರಾಟ ಬಿರುಸುಗೊಂಡಿದೆ. ಪಂಚಮಸಾಲಿ ಸಮುದಾಯದವರಷ್ಟೇ ಅಲ್ಲ, ವಿವಿಧ ಸಮುದಾಯಗಳ ಧರ್ಮಗುರುಗಳೂ ಈ ಹೋರಾಟದಲ್ಲಿ ಭಾಗಿಯಾಗಿ ಸತ್ಯಾಗ್ರಹಕ್ಕೆ ಶಕ್ತಿ ತುಂಬುತ್ತಿದ್ದಾರೆ. ಬುಧವಾರ ಆರ್ಯ ಈಡಿಗ ಸಮಾಜದ ಗುರುಗಳಾದ ಶ್ರೀ ಪ್ರಣಮಾನಂದ ಮಹಾಸ್ವಾಮಿ ಅವರೂ ಭಾಗಿಯಾದರು.
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ನೇತ್ರತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಯುತ್ತಿದೆ. ಇದೀಗ ಈ ಸತ್ಯಾಗ್ರಹ 32ನೇ ದಿನವೂ ಮುಂದುವರಿಯಿತು.
ಇದೆಲ್ಲದರ ನಡುವೆ, ಪಂಚಮಸಾಲಿ ಕೂಡಲಸಂಗಮ ಪೀಠದ ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಬುಧವಾರ ಆರ್ಯ ಈಡಿಗ ಸಮಾಜದ ಗುರುಗಳಾದ ಶ್ರೀ ಪ್ರಣಮಾನಂದ ಮಹಾಸ್ವಾಮಿ ಭೇಟಿ ನೀಡಿದರು. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅವರೂ ಭಾಗಿಯಾಗಿ ರಣೋತ್ಸಾಹ ತುಂಬಿದರು.