ಬೆಂಗಳೂರು: ಶೃಂಗೇರಿಯ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಸಂಸದೆ ಶೋಭಾ ಕರಂದ್ಲಾಜೆ ಖಂಡಿಸಿದ್ದಾರೆ.
ಈ ಘಟನೆ ಬೆಳಕಿಗೆ ಬರುತತಿದ್ದಂತೆಯೇ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಶೋಭಾ ಕರಂದ್ಲಾಜೆ ನಿರ್ದೇಶನ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಂಸದೆ ಸೋಭಾ ಕರಾಂದ್ಲಾಜೆ, ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎನ್ನಲಾದ ಆರೋಪಿಯನ್ನೂ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
SSLC ಓದುವ ಹುಡುಗಿ ತನ್ನ ಊರಿನಿಂದ ಶೃಂಗೇರಿಗೆ ಯಾಕೆ ಬಂದಳು? ಯಾಕೆ ಅವಳನ್ನು ಚಿಕ್ಕಮ್ಮ ದುರುಪಯೋಗ ಮಾಡಿದಳು? ಇದೇ ರೀತಿ ಇನ್ಯಾವ ಹುಡುಗಿಯ ಜೊತೆ ಆರೋಪಿ ಮಹಿಳೆ ಸಂಪರ್ಕ ಬೆಳೆಸಿದ್ದಾಳೆ ಎಂಬ ಬಗ್ಗೆ ಕೂಡ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.