ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯವಾದ ೭೦ ನೇ ಅಖಿಲ ಭಾರತ ಪೊಲೀಸ್ ಹಾಕಿ ಚಾಂಪಿಯನ್ ಶಿಪ್ ನಲ್ಲಿ ಗೆಲುವು ಸಾಧಿಸಿದ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಪಂಜಾಬ್ ಪೊಲೀಸ್ ತಂಡ ಪುರುಷರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಐಟಿಬಿಪಿ ತಂಡ ರನ್ನರ್ ಅಪ್ ತಂಡವಾಗಿ ಹೊರಹೊಮ್ಮಿತು.
ಕ್ರೀಡಾ ಸಚಿವ ನಾರಾಯಣಗೌಡ, ಚಿತ್ರನಟ ಶಿವರಾಜಕುಮಾರ್, ಶಾಸಕರಾದ ಎನ್ ಎ ಹ್ಯಾರಿಸ್, ಗೋವಿಂದರಾಜ, ಗೃಹ ಇಲಾಖೆಯ ಎಸಿಎಸ್ ಡಾ. ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.