ಬೆಳಗಾವಿ: ಬೆಳಗಾವಿಯಲ್ಲಿ ಕನ್ಬಡಿಗರಿಗೆ ಅಪಮಾನ ಮಾಡಿರುವ ಘಟನಯನ್ನು ಕನ್ನಡ ಚಿತ್ರನಟ ದರ್ಶನ್ ಖಂಡಿಸಿದ್ದಾರೆ.
ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ದರ್ಶನ್, ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವ ಘಟನೆಯನ್ನು ಖಂಡಿಸಿದರು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು ಎಂದವರು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.@CMofKarnataka pic.twitter.com/CzFy9tDOwU
— Darshan Thoogudeepa (@dasadarshan) December 18, 2021