ಮಂಗಳೂರು: ಬಂಟ್ವಾಳ ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಮತ್ತೊಮ್ಮೆ ಆತಂಕಕ್ಕೆ ತಳ್ಳಿದೆ.
ಅಬ್ದುಲ್ ರಹಿಮಾನ್ ಮಂಗಳವಾರ ಕೊಲೆಯಾಗಿದ್ದು, ಮೃತದೇಹವನ್ನು ಬುಧವಾರ ಬೆಳಿಗ್ಗೆ ಬಂಟ್ವಾಳ ಸಮೀಪದ ಬಿಸಿ ರೋಡ್ ಬಳಿ ಮಸೀದಿಗೆ ತರಲಾಯಿತು. ಆಗ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ಅಬ್ದುಲ್ ರಹಿಮಾನ್ ಕೊಲೆಯನ್ನು ಖಂಡಿಸಿರುವ ಮಂಗಳೂರಿನ ಮುಸ್ಲಿಂ ನಾಯಕರು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.























































