ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಂಧನಕ್ಕೊಳಗಾಗಿದ್ದಾರೆ.
2016ರ ಪ್ರಚಾರದ ಸಮಯದಲ್ಲಿ ನಟಿಗೆ ಹಣ ನೀಡಿದ ಆರೋಪವನ್ನು ಡೊನಾಲ್ಡ್ ಟ್ರಂಪ್ ಅವರು ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಬಂಧನ ಬೀತಿ ಎದುರಿಸುತ್ತಿದ್ದ ಅವರು ಮ್ಯಾನ್‌ಹ್ಯಾಟನ್ ನ್ಯಾಯಾಲಯದಲ್ಲಿ ಅಧಿಕಾರಿಗಳಿಗೆ ಶರಣಾಗಿದ್ದಾರೆ.
ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿಯು ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಅನುಮೋದಿಸಿತು. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ಸಂಬಂಧ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಮೂಲಗಳು ತಿಳಿಸಿವೆ.