ವಾಷಿಂಗ್ ಟನ್ ಡಿಸಿ: ಅಮೇರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅವರು ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಾಷಿಂಗ್ ಟನ್ ಡಿಸಿಯ ಕ್ಯಾಪಿಟಲ್ ಹಿಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ, ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಕೂಡಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.