ಬೆಂಗಳೂರು: ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೋಕ ವ್ಯಕ್ತಪಡಿಸಿದ್ದಾರೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ pic.twitter.com/PQq96zMKPI
— Basavaraj S Bommai (Modi Ka Parivar) (@BSBommai) October 22, 2022
ವಿಧಾನಸಭೆಯ ಉಪಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರು ನಮ್ಮನ್ನೆಲ್ಲ ಅಗಲಿದ ಸುದ್ದಿ ತಿಳಿದು ಅಘಾತವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಅವರ ನಿಧನದಿಂದ ನಾಡು ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ ಎಂದವರು ತಿಳಿಸಿದ್ದಾರೆ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿದ್ದ
ಶ್ರೀ ಆನಂದ ಮಾಮನಿ ಅವರು ನಮ್ಮನ್ನೆಲ್ಲ ಅಗಲಿದ ಸುದ್ದಿ ತಿಳಿದು ಅಘಾತವಾಯಿತು.
ಅವರ ನಿಧನದಿಂದ ನಾಡು ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/fDvDqlQdEo— K S Eshwarappa (Modi Ka Parivar) (@ikseshwarappa) October 23, 2022


























































