ನವದೆಹಲಿ,ಸೆ.17: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳ ವಶದದಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ವಿಶೇಷ ನ್ಯಾಯಾಲಯ, ನ್ಯಾಯಾಂಗ ಬಂಧನ ವಿಧಿಸಿದ್ದು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಕೋರ್ಟ್ ಆದೇಶಿಸಿದೆ. ಈಗಾಗಲೇ ಡಿಕೆಶಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ಇಡಿ ಕೋರ್ಟ್‍ಗೆ ಮಾಹಿತಿ ನೀಡಿದೆ. ಆದರೂ ಆರೋಗ್ಯ ಸಂಬಂಧಿ ವಿಚಾರವಾಗಿರುವುದರಿಂದ ವೈದ್ಯರ ಬಳಿ ಚರ್ಚಿಸಿ, ಅವಶ್ಯಕತೆಯಿದ್ದಲ್ಲಿ ನಾಳೆ ಮಧ್ಯಾಹ್ನದವರೆಗೆ ಆರ್ ಎಂಎಲ್ ಆಸ್ಪತ್ರೆಯಲ್ಲಿ ಉಳಿಯುವ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಆದೇಶ ನೀಡಿದೆ. ವೈದ್ಯರ ನಿರ್ಧಾರದ ಆಧಾರದ ಮೇಲೆ ಡಿಕೆಶಿ ನಾಳೆ ಮಧ್ಯಾಹ್ನದವರೆಗೆ ಆಸ್ಪತ್ರೆಯಲ್ಲಿ ಇರುತ್ತಾರಾ ಇಲ್ಲವೇ ನ್ಯಾಯಾಂಗ ಬಂಧನದಲ್ಲಿರುತ್ತಾರಾ ಎಂಬುದು ನಿರ್ಧಾರವಾಗಲಿದೆ.