ಬೆಂಗಳೂರು: ಉಕ್ರೇನ್ ನಲ್ಲಿ ಶೆಲ್ ಗಳ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದುಃಖ ವ್ಯಕ್ತಪಡಿಸಿದ್ದಾರೆ.
ಮೃತ ನವೀನ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದಾರೆ. ನವೀನ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಉಳಿದ ವಿಧ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
"ಉಕ್ರೇನ್ ನಲ್ಲಿ ಶೆಲ್ ಗಳ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ, ಈ ಕುರಿತು ನವೀನ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದೇನೆ.
ನವೀನ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು.
1/2— CM of Karnataka (@CMofKarnataka) March 1, 2022