ಬೆಂಗಳೂರು: ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರು ನೇಮಗೊಂಡಿದ್ದಾರೆ.
ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ಶಾಸಕ, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.