ಬೆಂಗಳೂರು: ರಾಜ್ಯ ಸರ್ಕಾರವು ಭ್ರಷ್ಟಾಚಾರ ನಿಗ್ರಹ ದಳವನ್ನು ಮುಚ್ಚಲು ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದವರು ಆರೋಪಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸಿಬಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗಲೇ ವಿರೋಧಿಸಿದ್ದರು. ಈಗ ಅದರ ಅಸ್ತಿತ್ವವನ್ನೇ ಇಲ್ಲವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಎ.ಸಿ.ಬಿ @BJP4Karnataka ಅವಧಿಯಲ್ಲಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗಲೇ ವಿರೋಧಿಸಿದ್ದರು. ಈಗ ಅದರ ಅಸ್ತಿತ್ವವನ್ನೇ ಇಲ್ಲವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ.
— Siddaramaiah (@siddaramaiah) June 9, 2021