ಬೆಂಗಳೂರು: ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ಪ್ರಕರಣ ಕುರಿತಂತೆ ಸತ್ಯ ಹೊರಬರಲಿ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಶ್ವನಾಥ್ ಪ್ರಕರಣ ಕುರಿತಂತೆ ಅವರು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದರು.
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ನನಗೆ ವಾಸ್ತವ ಅಂಶಗಳೇನು ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿಯನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಸರಿಯಾದ ತನಿಖೆಯ ಮೂಲಕ ಸತ್ಯ ಆಚೆಗೆ ಬರಲಿ. ಒಂದು ವೇಳೆ ಹತ್ಯೆ ಸಂಚು ನಿಜವೇ ಆಗಿದ್ದರೆ ಕಠಿಣವಾಗಿ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು.
ರಾಜಕಾರಣವೇ ಬೇರೆ. ಆದರೆ ಅದರ ನೆಪದಲ್ಲಿ ಭೂ ವ್ಯವಹಾರವೋ ಅಥವಾ ಇನ್ನವುದೋ ವ್ಯವಹಾರಗಳನ್ನು ನಡೆಸಬೇಕಾದರೆ ಹತ್ಯೆ ಮಾಡುವಂಥ ಹಂತಕ್ಕೆ ಯಾರೂ ತೆಗೆದುಕೊಂಡು ಹೋಗಬಾರದು. ಸರಕಾರ ನಿರ್ಲಕ್ಷ್ಯ ಮಾಡಿದೇ ದಕ್ಷ ಅಧಿಕಾರಿಗಳನ್ನು ಬಿಟ್ಟು ತನಿಖೆ ಮಾಡಿಸಿ ಸತ್ಯವನ್ನು ಹೊರಗೆಳೆದು ಜನರ ಮುಂದೆ ಇಡಬೇಕು ಎಂದು ಹೆಚ್ಡಿಕೆ ಒತ್ತಾಯಿಸಿದರು.