ಹುಬ್ಬಳ್ಳಿ:ಓಮಿಕ್ರಾನ್ ಪ್ರಕರಣಗಳ ನಿಯಂತ್ರಣಕ್ಕೆ ಕುರಿತಂತೆ ಭಾನುವಾರ ತಜ್ಞರ ಜೊತೆ ಸಮಾಲೋಚನೆ ನಡೆಸಲು ಸಭೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗಡಿ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಮತ್ತು ತಮಿಳನಾಡು ರಾಜ್ಯದಲ್ಲಿಯೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ ಎಂದರು.
ಬೆಂಗಳೂರಿನಲ್ಲಿ ಭಾನುವಾರ ತಜ್ಞರುಗಳೊಂದಿಗೆ ಸಭೆ ನಡೆಸಿ ಈಗಿರುವ ಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಮುಂದಿನ ಕ್ರಮಗಳ ಕುರಿತಂತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.