ದೆಹಲಿ: ರಾಜ್ಯದಲ್ಲಿನ ಕೋವಿಡ್ ಸಂಕಷ್ಟ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಮರುಗಿದ್ದಾರೆ. ಕರ್ನಾಟಕದಲ್ಲಿನ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ.
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಪ್ರಧಾನಿ, ಕರ್ನಾಟಕದ ಪರಿಸ್ಥಿತಿ ಬಗ್ಗೆಯೂ ಪರಿಸ್ಥಿತಿ ಅವಲೋಕಿಸಿದರು. ಆಮ್ಲಜನಕದ ಟ್ಯಾಂಕರು ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು. ಆಮ್ಲಜನಕ ಮತ್ತು ರೆಮ್ ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸಬೇಕು ಎಂದು ಸಲಹೆ ಮಾಡಿದ ಅವರು, ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅಭಯ ನೀಡಿದರು.