ಬೆಂಗಳೂರು: ಪಾದಯಾತ್ರೆ ಕರೋನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಕೈಗೊಂಡಿರುವ ಮೇಕೆದಾಟು ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿರುವ ಅವರು, ಆರಂಭದಲ್ಲಿ, ಇವರು, ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ. ಪರಿಣಾಮದ ಬಗ್ಗೆ, ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಮನವಿ ಮಾಡಿದ್ದೆವು. ಈಗ ನಮ್ಮ ಆತಂಕ ನಿಜವಾಗುತ್ತಿದೆ ಎಂದಿದ್ದಾರೆ.
ಕರೋನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪ ಪ್ರಚಾರ ಮಾಡುತ್ತಿರುವುದಲ್ಲದೆ ವಿತಂಡ ವಾದ ಮಂಡಿಸುತ್ತಿದ್ದಾರೆ. ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ, ಮನವಿ ಮಾಡುತ್ತೇನೆ, ನಿಮ್ಮ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ, ಪಾದಯಾತ್ರೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಕಾಂಗ್ರೆಸ್ ನಾಯಕರಿಗೆ ಗೃಹ ಸಚಿವರು ಸಲಹೆ ಮಾಡಿದ್ದಾರೆ
ಕರೋನಾ ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ,
ಸಮಾಜದ ಎಲ್ಲಾ ಜನರೂ, ವಿಶೇಷವಾಗಿ, ಎಲ್ಲಾ ಕ್ಷೇತ್ರದ ಶ್ರಮಿಕ ವರ್ಗದವರೂ ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು ಅವರ ಕ್ಷಮೆ ಕೇಳಬೇಕಾಗಿದೆ ಎಂದು ಸಚಿವರು ಹೇಳಿದ್ದಾರೆ.