ಉಡುಪಿ ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮಂತ್ರಿ ಶ್ರೀ ಹಾಲಪ್ಪ ಆಚಾರ್ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು .
ಈ ಸಂದರ್ಭ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ತೀರ್ಥಕ್ಷೇತ್ರ ನರಹರಿ ಪರ್ವತದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ವಿವರಿಸಿ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಶ್ರೀಗಳ ಮನವಿಗೆ ಸ್ಪಂದಿಸಿದ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ವಿಚಾರ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸುವುದಾಗಿ ಭರವಸೆ ನೀಡಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳಾದ ಡಾ ಪಂಕಜ್ ಕುಮಾರ್ ಪಾಂಡೆ , ನಿರ್ದೇಶಕ ರಾಮ್ ಮನೋಹರ್ ಪ್ರಸಾದ್, ಸಹಿತ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.