ಬೆಳಗಾವಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವು ಕಿತ್ತೂರು ಸಂಸ್ಥಾನದ ಅರಮನೆಯ ಪ್ರತಿರೂಪವನ್ನು ನಿರ್ಮಿಸಲು ಯೋಜನೆ ರೂಪಿಸಿದ್ದು, ಈ ಪರಿಕಲ್ಪನೆಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಡಿ.ಪಿ.ಆರ್., ಅಂದಾಜುಪಟ್ಟಿ, ನೀಲನಕ್ಷೆಗಳನ್ನು ಸಿದ್ಧಪಡಿಸಿ, ಅನುಮೋದನೆಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಈ ಯೋಜನೆಯ ಕುರಿತ ಪ್ರದರ್ಶಿಸಿದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಸಿಎಂ, ಕಿತ್ತೂರು ಕೋಟೆಯ ಆವರಣದಲ್ಲಿರುವ ಅರಮನೆಯ ಅವಶೇಷಗಳನ್ನು ಸಂರಕ್ಷಿಸುವಂತೆ ಸೂಚಿಸಿದರು. ಈ ಉದ್ದೇಶಿತ ಅರಮನೆಯಲ್ಲಿ ಕಿತ್ತೂರು ಸಂಸ್ಥಾನದ ಇತಿಹಾಸ, ಚನ್ನಮ್ಮಳ ಹೋರಾಟ, ಸ್ಥಳೀಯ ಸಂಸ್ಕೃತಿ, ಜನಜೀವನ ಬಿಂಬಿಸಲು ಬಹುಮಾಧ್ಯಮ ಬಳಕೆ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಪ್ರಾಧಿಕಾರ ಸದಸ್ಯರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.