ಮಡಿಕೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೊಡಗಿನ ಭಾಗಮಂಡಲದಲ್ಲಿ ಭಗಂಡೇಶ್ವರ ದೇಗುಲದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿದರು.
ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ವರೂಪದಲ್ಲಿ ನೀರು ಕುಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮುಖಂಡರಾದ ಆರ್.ವಿ. ವೆಂಕಟೇಶ್, ವೀಣಾ ಅಚ್ಚಯ್ಯ ಮತ್ತಿತರರು ಇದ್ದರು.