ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಇನ್ನೂ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಸೋಂಕಿನ ವೇಗದ ಪ್ರಮಾಣ ತಗ್ಗಿದೆ. ವಿವಿಧ ರಾಜ್ಯಗಳಲ್ಲಿ ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆವರೆಗೆ 41,157 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 3,11,06,065 ಏರಿಕೆಯಾಗಿದೆ. ಸದ್ಯ, ಇಡೀ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,22,660.
ಇದೇ ವೇಳೆ ಒಂದೇ ದಿನದಲ್ಲಿ 518 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.



























































