ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಸೋಂಕಿನ ವೇಗದ ಪ್ರಮಾಣ ತಗ್ಗಿದೆ. ವಿವಿಧ ರಾಜ್ಯಗಳಲ್ಲಿ ಶನಿವಾರದ ಅಂಕಿ ಅಂಶಗಳ ಪ್ರಕಾರ ಶುಕ್ರವಾರ ಒಂದೇ ದಿನ 48,698 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 3,01,83,143ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಒಂದೇ ದಿನದಲ್ಲಿ 1,183 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

































































