ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಇರುವ ಕಾರಣ ಬಹುನಿರೀಕ್ಷಿತ ಬಂಡವಾಳದಾರರ ಸಮಾವೇಶ ಮುಂದೂಡುವ ಮುನ್ಸೂಚನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಆರು ತಿಂಗಳ ಅವಧಿಯಲ್ಲಿ ಯಶಸ್ವಿಯಾಗಿ ಮಾಡಲು ಆಗುತ್ತದೆಯೋ ಇಲ್ಲವೋ ಎಂಬ ಅನುಮಾನುವನ್ನು ವ್ಯಕ್ತಪಡಿಸಿದರು.
ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಿರಾಣಿ ತಿಳಿಸಿದರು.