ಮಂಗಳೂರು: ದೇಶದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ ಮಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ, ಪ್ರಕರಣಗಳ ಸಂಖ್ಯೆ, ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪ್ರಧಾನಿಗಳಿಗೆ ವಿವರಿಸಲಿದ್ದಾರೆ.