ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ನಿರಾಳರಾಗಿದ್ದಾರೆ. ಪ್ರಜರಣ ಸಂಬಂಧ ತನಿಖಾಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟನ್ನು ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯವು ಅಂಗೀಕಾರಿಸಿದೆ.
ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ 2022ರ ಏಪ್ರಿಲ್ 12ರಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವರಾಗಿದ್ದ ಈಶ್ವರಪ್ಪ ಅವರು ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಸಚಿವ ಸ್ಥಾನವನ್ನು ತ್ಯಜಿಸಬೇಕಾಯಿತು.
ಸುದೀರ್ಘ ತನಿಖೆ ನಡೆಇಸಿರುವ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಶನಿವಾರ ಬಿ-ರಿಪೋರ್ಟ್ ಅಂಗೀಕರಿಸಿದೆ