ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರಿಸಿದರುು.
ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸಹಿತ ಬಿಜೆಪಿ ನಾಯಕರನೇಕರು ಭಾಗವಹಿಸಿ ನೂತನ ಸಿಎಂಗೆ ಶುಭ ಹಾರೈಸಿದರು.
ಕರ್ನಾಟಕದ ಅನೇಕ ಧುರೀಣರೂ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಇಂದು ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಪ್ರಮೋದ್ ಸಾವಂತ್ ಅವರಿಗೆ ಶುಭ ಕೋರಿದರು.