ಬೆಂಗಳೂರು: ಗೋವಾ ನೂತನ ಸಿಎಂ ಪ್ರಮೋದ್ ಸಾವಂತ್ ಅವರಿಗೆ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಶುಭ ಹಾರೈಸಿದ್ದಾರೆ.
ಬಸವರಾಜ ಬೊಮ್ಮಾಯಿ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಪರಸ್ಪರ ಶುಭ ಕೋರಿದರು. ಇಂದು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಭಾಗವಹಿಸಲು ಇಬ್ಬರೂ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಲಖನೌಗೆ ತೆರಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ ಉಪಸ್ಥಿತರಿದ್ದರು.