ದೊಡ್ಡಬಳ್ಳಾಪುರ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಹುಂಡಿ ಹಣ ಎಣಿಕೆ ಮಾಡಲಾಯಿತು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣ ಶಾಸ್ತ್ರಿ, ಇಂಡಿಯನ್ ಬ್ಯಾಂಕ್ ಸಿಬ್ಬಂದಿ ಹಾಗೂ ದೇವಾಯದ ಸಿಬ್ಬಂದಿ ಸಮ್ಮುಖದಲ್ಲಿ ಹಣ ಎಣಿಕೆ ಮಾಡಲಾಯಿತು.
ಹುಂಡಿಯಲ್ಲಿ ಒಟ್ಟು 64,66,752 ನಗದು, 2.2 ಕೆ.ಜಿ.ಬೆಳ್ಳಿ, ,1.1 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ಯನ್ನಾಗಿ ನೀಡಿದ್ದರು. ಕಳೆದ ಫೆಬ್ರುವರಿ 22 ರಂದು ಹುಂಡಿ ತೆರೆಯಲಾಗಿತ್ತು.