ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತಂತೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನಾಟಿಗೆ ಜಾಮೀನು ಮಂಜೂರು ಮಾಡಲು ಕೋರ್ಟ್ ನಿರಾಕರಿಸಿದೆ.
ಇನ್ನೊಂದೆಡೆ, ಮತ್ತೊಬ್ಬ ಆರೋಪಿ ತರುಣ್ ಕೂಡಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.