ಬೆಂಗಳೂರು : ಮಾಜಿ ಶಾಸಕ ಹೆಚ್.ಡಿ.ಚೌಡಯ್ಯ ಅವರ ನಿಧನಕ್ಕೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಆತ್ಮೀಯರೂ, ಹಿತೈಶಿಗಳೂ ಆಗಿದ್ದ ಮಂಡ್ಯದ ಹಿರಿಯ ಮುತ್ಸದ್ದಿ ಹೆಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ ಎಂದವರು ನೋವು ಹಂಚಿಕೊಂಡಿದ್ದಾರೆ.
94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಶಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ. ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದವರು ಹೇಳಿದ್ದಾರೆ.
ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದವರು ಚೌಡಯ್ಯ ಅವರು. 4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, 2 ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ
ಮಂಡ್ಯದ ಪ್ರತಿಷ್ಟಿತ ಪಿಇಟಿ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು. ಚೌಡಯ್ಯನವರು ಮಂಡ್ಯದ ಸ್ವಾಭಿಮಾನಿ ರಾಜಕಾರಣದ ಪ್ರತೀಕವಾಗಿದ್ದರು. ಇವರ ಅಗಲಿಕೆಯಿಂದ ನನ್ನ ಸಹೃದಯಿ ಹಿತೈಶಿಯೊಬ್ಬರನ್ನು ಕಳೆದುಕೊಂಡಿದ್ದೀನಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.