ಬೆಳಗಾವಿ: ಕಣಿವೆ ರಾಜ್ಯ ಜಮ್ಮು – ಕಾಶ್ಮೀರದ ಪೊಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗರು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ.
ಬೆಳಗಾವಿ ಜಿಲ್ಲೆ ಸಾಂಬ್ರಾ ಗ್ರಾಮದ 45 ವರ್ಷದ ಸುಬೇದಾರ್ ದಯಾನಂದ ತಿರಕಣ್ಣವರ, ಉಡುಪಿ ಜಿಲ್ಲೆ ಕೋಟೇಶ್ವರ ಬಿಜಾಡಿಯ 33 ವರ್ಷದ ಅನೂಪ್, ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಯೋಧರ ಸಾವಿನ ಬಗ್ಗೆ ದುಃಖ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು ಎಂದಿದ್ದಾರೆ. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ದೇಶ ಸೇವೆಗಾಗಿ ಜೀವ… pic.twitter.com/g4NtK5aNhY
— CM of Karnataka (@CMofKarnataka) December 25, 2024



















































