ಬೆಂಗಳೂರು: ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ. ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು ಎನ್ನುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕೋವಿಡ್ ಯಾರನ್ನೂ ಬಿಟ್ಟಿಲ್ಲ. ಅವರ ಕುಟುಂಬದ ಸದಸ್ಯರು ಹಾಗೂ ಮಣಿಪಾಲ ಅಸ್ಪತ್ರೆಯ ವೈದ್ಯರೊಂದಿಗೆ ಮಾತನಾಡುವುದಾಗಿ ತಿಳಿಸಿದರು.