ಬೆಂಗಳೂರು: ‘ಟಾಕ್ಸಿಕ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ. ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಸಂಬಂಧ ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಇದೆ. ಈ ಸಂಬಂಧ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ.
ನೋಟಿಸ್ ಗೆ ಅಧಿಕಾರಿಗಳು ಉತ್ತರ ನೀಡಲಿದ್ದು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.