ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಮುಂದೂಡಿದೆ.
ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳ ಮೂಲಕ ಭಾರೀ ಪ್ರಚಾರ ಗಿಟ್ಟಿಸಿಕೊಂಡಿರುವ ‘ಟಾಕ್ಸಿಕ್’ ಸಿನಿಮಾವು ಮಾರ್ಚ್ 19ರಂದು ಬಿಡುಗಡೆಯಾಗಬೇಕಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿಲ್ಲ ಎಂದು ಚಿತ್ರ ತಂಡದ ಮೂಲಗಳು ತಿಳಿಸಿವೆ.
ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಅಮೆರಿಕ ಮತ್ತು ಇರಾನ್ ದೇಶಗಳ ನಡುವಿನ ಸಂಘರ್ಷದ ಕಾರಣದಿಂದ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ. ಭಾರತೀಯ ಸಿನಿಮಾಗಳಿಗೆ ಉತ್ತಮ ಮಾರುಕಟ್ಟೆ ಆಗಿರುವ ಅರಬ್ ದೇಶಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ದುಬೈ, ಅಬುದಾಭಿ, ಶಾರ್ಜಾ ಸಹಿತ ಅರಬ್ ದೇಶಗಳೂ ಭಾರತೀಯ ಸಿನಿಮಾಗಳಿಗೆ ಬೃಹತ್ ಮಾರುಕಟ್ಟೆಯಾಗಿದೆ. ಆದರೆ, ಅಲ್ಲಿ ಸದ್ಯದ ಪರಿಸ್ಥಿತಿ ಗೊಂದಲದಿಂದ ಕೂಡಿದೆ. ಈ ವಿಷಮ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂಬ ಅಭಿಪ್ರಾಯಗಳು ವ್ಯಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.






















































