ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 9 ಮಂದಿಗೆ ಸೋಂಕು ತಗುಲಿದಂತಾಗಿದೆ.
ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ 49 ವರ್ಷದ ವ್ಯಕ್ತಿ ಇದೇ 20 ರಂದು ದುಬೈನಿಂದ ಅರಬ್ ಎಂಬರೀಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಬೆಂಗಳೂರಿನಿಂದ ಖಾಸಗಿ ಟ್ಯಾಕ್ಸಿಯ ಮೂಲಕ ಪುತ್ತೂರಿಗೆ ಬಂದಿದ್ದರು.
ಇದೇ 28 ರಂದು ಈ ವ್ಯಕ್ತಿಯಲ್ಲಿ ಗಂಟಲು ನೋವು ಕಾಣಿಸಿಕೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದಿದ್ದು, ಕೋವಿಡ್-19 ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.