ಕಿಲ್ಲರ್ ವೈರಸ್ ಕೊರೋನಾ ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ವಿಶ್ವದೆಲ್ಲೆಡೆ ಪಸರಿಸಿದ ಕೊರೋನಾ ಇದೀಗ ಜನರಲ್ಲಿ ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.ಇತ್ತ ನಮ್ಮ ದೇಶದಲ್ಲೂ ಕೊರೋನಾ ಸೋಂಕು ಹರಡುವಿಕೆ ಬಹಳ ಕಡಿಮೆ ಇದ್ದಾಗ ಲಾಕ್‍ಡೌನ್ ಮಾಡಿ, ಸೋಂಕು ಹರಡುವಿಕೆ ತೀವ್ರವಾಗಿರುವಾಗ ಹೆಸರಿಗೆ ಮಾತ್ರ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯ ಜೊತೆಗೆ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿದೆ.
ಅಂದಹಾಗೆ ಭಾರತದಲ್ಲಿ ಮೇ 30ರಿಂದ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸೋಮವಾರ ಒಂದೇ ದಿನಕ್ಕೆ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿದ್ದು ವೈರಸ್ ಪೀಡಿತರ ಸಂಖ್ಯೆ 7 ಲಕ್ಷ ಗಡಿ ಸಮೀಪ ಬಂದಿದೆ. ಕಳೆದ ವಾರ ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗ್ತಾ ಇರೋ ಟ್ರೆಂಡ್ ಶುರುವಾಗಿದೆ.
ಇನ್ನು ದೇಶದಲ್ಲಿ 8,171 ಪ್ರಕರಣಗಳು ದಾಖಲಾಗಿದ್ದು ಈ ಮೂಲಕ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ ಸಂಖ್ಯೆ1,98,706ಕ್ಕೆ ಏರಿಕೆಯಾಗಿದೆ.
ಇದಲ್ಲದೆ ನಿನ್ನೆ ಒಂದೇ ದಿನ ಕೊರೋನಾದಿಂದ 204 ಜನ ಮೃತಪಟ್ಟಿದ್ದು ಇದರಿಂದ ದೇಶದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 5,598ಕ್ಕೆ ಏರಿಕೆಯಾಗಿದೆ. ಕೊರೋನಾ ದಿಂದ ಈವರೆಗೆ 95,526 ಜನ ಮಾತ್ರ ಗುಣಮುಖ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳು ತಿಳಿಸಿವೆ.