ಬೆಂಗಳೂರು: ಜಯನಗರ ಬಡಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕಚೇರಿಯನ್ನು ಅನಂತ ಪ್ರೇರಣಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಈ ಕೇಂದ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ ಗರುಡಾಚಾರ್, ರವಿಸುಬ್ರಹ್ಮಣ್ಯ, ಅದಮ್ಯ ಚೇತನ ಸಂಸ್ಥೆ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್, ಅನಂತಕುಮಾರ ಪ್ರತಿಷ್ಠಾನದ ಅಧ್ಯಕ್ಷ ಪಿ ಕೃಷ್ಣ ಭಟ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
© 2020 Udaya News – Powered by RajasDigital.