,ಹುಬ್ಬಳ್ಳಿ: ದೆಹಲಿಯಲ್ಲಿ ಉತ್ತಮ ಆಡಳಿತ ನೀಡುವುದು ಕಾಂಗ್ರೆಸ್ ಗುರಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಪ್ರದೇಶ ಕಾಂಗ್ರೆಸ್ ನಾಯಕರ ಜೊತೆ ಸಭೆನಡೆಸಿದ ಬಳಿಕ ಸುದ್ದಿಗಾರರೊಙದಿಗೆ ಮಾತನಾಡಿದ ಅಚರು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಅನ್ನು ಹೊರಗಿಡುವ ಯತ್ನದ ಬಗ್ಗೆ ಪ್ರತಿಕ್ರಿಯಿಸಿದರು, “ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಹೋರಾಟ ಮಾಡುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಶೀಲಾ ದೀಕ್ಷಿತ್ ಅವರ ನೇತೃತ್ವದಲ್ಲಿ 15 ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡಿತ್ತು. ದೆಹಲಿಯಲ್ಲಿ ಸಾಧನೆ ಮಾಡಿದ್ದರೆ ಅದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ನಂತರ ದೆಹಲಿ ವಾಯು ಮಾಲೀನ್ಯ, ಕೊಳೆಗೇರಿ ಸೇರಿದಂತೆ ಅನೇಕ ಸಮಸ್ಯೆಗಳಿಂದ ತತ್ತರಿಸಿದೆ. ದೇಶದ ಎಲ್ಲಾ ಭಾಗಗಳಿಂದ ದೆಹಲಿಗೆ ಹೋಗುವ ಜನ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಅನಿವಾರ್ಯತೆ ಎದುರಾಗಿದೆ. ದೆಹಲಿಯಲ್ಲಿ ಉಸಿರಾಡುವುದು ಕಷ್ಟವಾಗಿದೆ. ಇದಕ್ಕೆ ಮೋದಿ ಅವರ ಸರ್ಕಾರ ಹಾಗೂ ಆಪ್ ಸರ್ಕಾರ ಪಾಲುದಾರರಾಗಿದ್ದು, ದೆಹಲಿಯ ಸಮಸ್ಯೆಗೆ ಕಾಂಗ್ರೆಸ್ ಪರಿಹಾರವಾಗಿದೆ. ದೆಹಲಿಗೆ ಹೊಸ ಸ್ವರೂಪ ನೀಡಲು ನಾವು ಹೋರಾಟ ಮಾಡುತ್ತಿದ್ದೇವೆ. ರಾಜಕೀಯ ಪಕ್ಷವಾಗಿ ಜನರಿಗೆ ಉತ್ತಮ ಪರ್ಯಾಯ ಆಯ್ಕೆಯಾಗಿರುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.
ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಂಡು ಈಗ ದೂರವಾಗಿದ್ದೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಚರು, “ಪ್ರತಿ ಚುನಾವಣೆಯೂ ಭಿನ್ನ ಚುನಾವಣೆಯಾಗಿದೆ. ಒಂದು ಚುನಾವಣೆಯಲ್ಲಿ ಆಗಿದ್ದೆ ಮತ್ತೊಂದು ಚುನಾವಣೆಯಲ್ಲಿ ಆಗಬೇಕು ಎಂಬುದಿಲ್ಲ. ನಾವು ದೆಹಲಿಯಲ್ಲಿ ಉತ್ತಮ ಆಡಳಿತ ನೀಡಲು ಪ್ರಯತ್ನಿಸುತ್ತಿದ್ದೇವೆ. ಶೀಲಾ ದೀಕ್ಷಿತ್ ಅವರ ಕಾಲದಲ್ಲಿ ಸಿಕ್ಕ ಆಡಳಿತ ಮತ್ತೆ ಸಿಗಲಿ ಎಂದು ಅಲ್ಲಿನ ಜನ ಕಾಯುತ್ತಿದ್ದಾರೆ” ಎಂದು ತಿಳಿಸಿದರು.