ಹಿಂದೂ ದೇವಾಲಯಗಳನ್ನು ಕಾನೂನಿನ ಹಿಡಿತದಿಂದ ಮುಕ್ತಗೊಳಿಸುವ ರಾಜ್ಯ ಸರ್ಕಾರದ ಚಿಂತನೆ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಈಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿಂದೂ ದೇವಾಲಯಗಳನ್ನು ಸರ್ಕಾರ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದರೆ ನಮ್ಮ ತಕರಾರು ಖಂಡಿತಾ ಇಲ್ಲ. ಸಾರಾಸಗಟಾಗಿ ಎಲ್ಲಾ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೊದಲು ದೇವಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಒಮ್ಮೆ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ರಾಜ್ಯದ ಸಾಕಷ್ಟು ದೇವಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ, ಅವುಗಳನ್ನು ಸ್ವತಂತ್ರಗೊಳಿಸಿದರೆ ದೇವಾಲಯ ನಡೆಸಿಕೊಂಡು ಹೋಗುವುದು ಕಷ್ಟವಾಗಿ ಉಪಕಾರಕ್ಕಿಂತ ತೊಂದರೆಯೇ ಹೆಚ್ಚಾಗುತ್ತದೆ ಎಂದವರು ಹೇಳಿದರು.
ಜನರನ್ನು ಭಾವನಾತ್ಮಕವಾಗಿ ಹಾದಿ ತಪ್ಪಿಸಲು ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನರು ಬುದ್ದಿವಂತರಿದ್ದಾರೆ. ತಾವೇನು ತೀರ್ಮಾನ ಮಾಡಬೇಕು ಅದನ್ನೇ ಜನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.