ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ.
ವ್ಯಕ್ತಿಗತವಾಗಿ ನನಗೆ ಬಹಳ ಇಷ್ಟದ ವ್ಯಕ್ತಿ, ನಟ ಆಗಿದ್ದರು ಪುನೀತ್. ಅವರ ಜತೆ ಸಾಕಷ್ಟು ಸಮಯ ಕಳೆದಿದ್ದೇನೆ. ಜತೆಯಲ್ಲಿ ಹಲವು ಬಾರಿ ಊಟವನ್ನು ಮಾಡಿ ಚಿತ್ರರಂಗದ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಅಲ್ಲದೆ, ಡಾ.ರಾಜಕುಮಾರ್ ಅವರ ಕುಟುಂಬದ ಜತೆ ನನ್ನ ಬಾಂಧವ್ಯ ಇಂದು ನಿನ್ನೆಯದಲ್ಲ ಎಂದು ಹೆಚ್ಡಿಕೆ ಹೇಳಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ.1/2 pic.twitter.com/v9E0dXLkpy
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 29, 2021
ಅಣ್ಣಾವ್ರ ಪುತ್ರರಾದರ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು; ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದವರು ಹೇಳಿದ್ದಾರೆ.