ಉಡುಪಿ: ಬ್ರಹ್ಮಾವರ ಬಳಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಭಾನುವಾರ ನಡೆದಿದೆ. ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದ ಇಬಾಜ್, ಫಜಾನ್, ಸೂಫಾನ್, ಫರಾನ್ ಎಂದು ಗುರುತಿಸಲಾಗಿದೆ.
ರಂಜಾನ್ ನಿಮಿತ್ತ ಬ್ರಹ್ಮಾವರದ ಸಂಬಂಧಿಕರ ಮನೆಗೆ ತೆರಳಿದ್ದ ಈ ದುರ್ದೈವಿಗಳು ದೋಣಿ ಮೂಲಕ ಮೀನು ಹಿಡಿಯಲು ತರಳಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ದೋಣಿಯಲ್ಲಿ ಏಳು ಯುವಕರು ತೆರಳಿದ್ದರು ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.