ದಸ್ಸಾಲ್ಸ್ ಸಿಸ್ಟಮ್ಸ್ ಹಾಗೂ ನೆಸ್ಟ್ಲೇ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಸಿಎಂ ಚರ್ಚೆ
ದಾವೋಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ದಸ್ಸಾಲ್ಸ್ ಸಿಸ್ಟಮ್ಸ್ ಹಾಗೂ ನೆಸ್ಟ್ಲೇ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳ ಚರ್ಚಿಸಿದರು.
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು.
ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.







































































