ಮುಂಬಯಿ: ಮಹಾರಾಷ್ಟ್ರದ ನಾಸಿಕ್ ಬಳಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ಫ್ಯಾಕ್ಟರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಈ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಫ್ಯಾಕ್ಟರಿಯನ್ನು ಆವರಿಸಿಕೊಂಡಿತು.
ಅಗ್ನಿ ದುರಂತ ಘಟಿಸಿದ ಸಂದರ್ಭದಲ್ಲಿ ಆ ಫ್ಯಾಕ್ಟರಿಯಲ್ಲಿ ನೂರಾರು ಮಂದಿ ಕಾರ್ಮಿಕರು ಕರ್ತವ್ಯದಲ್ಲಿದ್ದರೆನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು.
Jindal poly films pic.twitter.com/WuVCMvMiGc
— Neel Shah (@neelshah1304) January 1, 2023





















































