ನಿವೃತ್ತ ನ್ಯಾಯಮೂರ್ತಿ ಕೆ. ಎಲ್. ಮಂಜುನಾಥ್ ವಿಧಿವಶ: ಗಣ್ಯರ ಕಂಬನಿ
ಬೆಂಗಳೂರು: ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ.
ಅವರು ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೆ.ಎಲ್. ಮಂಜುನಾಥ್ ಅವರು ಸುಮಾರು 14 ವರ್ಷಗಳ ಕಾಲ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.
ನ್ಯಾಯಮೂರ್ತಿ ಕೆ. ಎಲ್. ಮಂಜುನಾಥ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ