ಬೆಂಗಳೂರು: ನೈಸ್ ಸಂಸ್ಥೆಯಾ ಅಕ್ರಮದ ವಿರುದ್ಧ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಘೋಷ್ಠಿ ನಡೆಸಿದ ಅವರು, ನೈಸ್ ಸಂಸ್ಥೆ ಟೋಲ್ ಹಣವನ್ನು ಸರ್ಕಾರದ ಅನುಮತಿ ಇಲ್ಲದೆ ಹೆಚ್ಚಳ ಮಾಡಿದೆ.ನೈಸ್ ಸಂಸ್ಥೆಯು ಸರ್ಕಾರದ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿದೆ ಎಂದು ದೂರಿದರು.
ಈ ಅಕ್ರಮ ಕುರಿತಂತೆಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ನೈಸ್ ಸಂಸ್ಥೆಗೆ ಕೊಮ್ಮನಗಟ್ಟದ ಬಳಿ ನೀಡಿರೋ 41 ಎಕರೆ ಜಾಗದ ಸೇಲ್ ಡೀಡ್ ರದ್ದುಗೊಳಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದರು.
ನಾನು ಒಳ್ಳೆ ಉದ್ದೇಶಕ್ಕಾಗಿ ಯೋಜನೆ ತಂದೆ.
ಆದ್ರೆ ನಂತ್ರ ಇದ್ರಲ್ಲಿ ಅನೇಕ ನಿಯಮಗಳನ್ನೂ ಬದಲಾವಣೆ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ ದೇವೇಗೌಡರು, ನೈಸ್ ಬಗ್ಗೆ ಸದನ ಸಮಿತಿ ಮಾಡಿದ್ರು. ಸದನ ಸಮಿತಿ ವರದಿ ಕೊಡ್ತು ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ದೂರಿದರು.
ಮೈಸೂರು ರೋಡ್ ಮಾಡಿದ ಮೇಲೆ ಟೌನ್ ಶಿಪ್ ಮಾಡಬೇಕು ಅಂತ ಇತ್ತು. ಆದರೆ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಸದನ ಸಮಿತಿ ಟೋಲ್ ಸಂಗ್ರಹ ರದ್ದು ಮಾಡಿ ಅಂತ ವರದಿ ಕೊಟ್ಟಿತ್ತು ಆದ್ರೆ 2016 ರಲ್ಲಿ ನೈಸ್ ಸಂಸ್ಥೆ ಅವರು ಹೈಕೋರ್ಟ್ ನಲ್ಲಿ ಸ್ಟೇ ತೆಗೆದುಕೊಳ್ತಾರೆ ಎಂದ ಅವರು, ಸದನ ಸಮಿತಿಯ ವರದಿ ಮೀರಿ ಟೋಲ್ ಸಂಗ್ರಹ ಆಗಿದೆ. 2016 ರಿಂದ 2022 ರವರೆಗೆ ಟೋಲ್ ಸಂಗ್ರಹ ಮಾಡಿದ್ದಾರೆ. ನಿತ್ಯ 2-3 ಕೋಟಿ ಸಂಗ್ರಹ ಆಗುತ್ತೆ. ಯಾರಾದ್ರು ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
KIADB ಜಾಗವನ್ನು METRO ಗೆ 14 ಕೋಟಿಗೆ ನೈಸ್ ಸಂಸ್ಥೆ ಮಾರಾಟ ಮಾಡಿದೇ , ಈಗ ಮತ್ತೆ METRO ಗೆ ಸುಮಾರು 100 ಕೋಟಿಗೆ ಮಾರಾಟ ಮಾಡಿ ದುಡ್ಡು ಮಾಡಲು ನೈಸ್ ಸಂಸ್ಥೆ ಹೊರಟಿದೆ ಎಂದವರು ದೂರಿದರಲ್ಲದೆ, ಇದು ಪ್ರಾರಂಭ. ಮುಂದೆ ಇನ್ನು ಹೋರಾಟ ಇದೆ ಎಂದರು.
ನಾನು ಕಣ್ಣು ಮುಚ್ಚಿಕೊಂಡು ಈ ಪ್ರಾಜೆಕ್ಟ್ ಮಾಡಿಲ್ಲ. ನಿಯಮ ಬದ್ದವಾಗಿ ಮಾಡಿದ್ದೆ. ನನ್ನ ಮೇಲೆ ಎರಡು ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ರು. ಅದಕ್ಕೆ ಕೋರ್ಟ್ ಸ್ಟೇ ಕೊಟ್ಟಿದೆ. ನನ್ನ ಮೇಲೆ ಕೇಸ್ ಇದೆ. ಸರ್ಕಾರ ಈಗಲಾದ್ರು ಕ್ರಮ ತೆಗೆದುಕೊಳ್ಳಲಿ ಎಂದ ಅವರು, ಎಲ್ಲಾ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಆದ್ರೆ ಏನು ಪ್ರಯೋಜನ ಆಗಿಲ್ಲ. ಲೋಕೋಪಯೋಗಿ ಇಲಾಖೆ ಸಚಿವರು ಮಾತ್ರ ನನ್ನ ಪತ್ರಕ್ಕೆ ಉತ್ತರ ಬರೆದಿದ್ದಾರೆ. ಈಗಿನ ಸಿಎಂ ಪಾಪ ತುಂಬಾ ಬ್ಯುಸಿ ಇದ್ದಾರೆ. ಅದಕ್ಕೆ ಸಂಬಂಧ ಪಟ್ಟ ಮಂತ್ರಿಗಳಿಗೆ ಕೆಲಸ ಮಾಡಲು ಹೇಳಲಿ ಎಂದರಲ್ಲದೆ, ನೈಸ್ ವಿರುದ್ದ ಕ್ರಮ ಕೈಗೊಳ್ಳುವಂತೆಯೂ ದೇವೇಗೌಡರು ಸರ್ಕಾರವನ್ನ ಒತ್ತಾಯಿಸಿದರು.