ಮನೆಮನೆಯ ಮೇಲೂ ಕನ್ನಡ ಭಾವುಟ ಹಾರಲಿ ಎಂದು ಸಿಎಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ನವೆಂಬರ್ 1 ಕ್ಕೆ ಪ್ರತಿ ಮನೆಯಲ್ಲಿ ಕನ್ನಡ ಧ್ವಜ ಹಾರಿಸಲು ನಾನು ಮನವಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರು, ಹಲವಾರು ಸಂಘಟನೆಗಳು ತಮ್ಮ ಮನೆ ಮೇಲೆ ಧ್ವಜ ಹಾರಿಸಲು ತೀರ್ಮಾನಿಸಿದಕ್ಕೆ ನಾನು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಹೆಚ್ ಡಿಕೆ, ನವೆಂಬರ್1 ರಂದು ಪಂಚರತ್ನ ಯಾತ್ರೆಯಂದು ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ನಮ್ಮ ನಾಡಿನಲ್ಲಿ ಭಾಷೆಗೆ ಧಕ್ಕೆ ಬರುವ ರೀತಿಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ನಾವು ಎದುರಿಸಲು ಸಿದ್ದವಾಗಿದ್ದೇವೆ ಎಂದರು.
ಇದೇ ವೇಳೆ, ದಾಸರಹಳ್ಳಿ ಶಾಸಕ ಮಂಜುನಾಥ್ ಅವರು, ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿ ಮನೆ ಮೇಲೆ ಬಾವುಟ ಹಾರಿಸಲು ಕರೆ ನೀಡಿದ ಹೆಚ್ ಡಿಕೆ, ದಾಸರಹಳ್ಳಿಯಲ್ಲಿ ಕನ್ನಡದ ಬಾವುಟ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಸ್ವಇಚ್ಛೆಯಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಎಎಪಿ ಹಾಗೂ ಇತರೆ ಪಕ್ಷದ ಮುಖಂಡರು ಜೆಡಿಎಸ್ ಸೇರ್ಪಡೆ ಆಗುತ್ತಿದ್ದು, ಅವರೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುವುದಾಗಿ ಕುಮಾರಸ್ವಾಮಿ ಹೇಳಿದರು.



























































