ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಇದೀಗ ಕರ್ನಾಟಕದತ್ತ ಪ್ರಧಾನಿ ನರೇಂದ್ರ ಮೋದಿ ಚಿತ್ತ ನೆಟ್ಟಿದ್ದಾರೆ. ಮೇ 10ರಂದು ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ (R. Ashoka) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಅಧಿಕಾರ ಸಾಧಿಸಿರುವುದು ಮತ್ತು ಕೇರಳದಲ್ಲಿ ಮೂರು ಸ್ಥಾನಗಳಲ್ಲಿ ಗೆಲುವು ದಾಖಲಿಸಿರುವ ಹಿನ್ನೆಲೆ HAL Airport ಹೆಚ್‌ಎಎಲ್ ಏರ್‌ಪೋರ್ಟ್ (HAL Airport) ಪ್ರವೇಶದ್ವಾರ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮೇ 10ರಂದು ಬೆಳಿಗ್ಗೆ 9 ಗಂಟೆಗೆ ಪ್ರಧಾನಿ ಮೋದಿ ಹೆಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಇದು ಸಂಪೂರ್ಣ ಬಿಜೆಪಿ ಕಾರ್ಯಕ್ರಮವಾಗಿದ್ದು, ನಂತರ ಪ್ರಧಾನಿ ಮೋದಿ Art of Living Foundation ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ (Art of Living Foundation) ಸಂಸ್ಥಾಪಕ Ravi Shankar ರವಿಶಂಕರ್ ಗುರುಜಿ (Ravi Shankar) ಆಶ್ರಮದ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ ಎಂದು ಆರ್. ಅಶೋಕ್ ಮಾಹಿತಿ ನೀಡಿದರು.























































