ಬೆಂಗಳೂರು:ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗುಡಿಹಳ್ಳಿ ನಾಗರಾಜ್ ಅವರು ರಂಗಭೂಮಿ ಬಗ್ಗೆ ಅವರಿಗೆ ವಿಶೇಷ ಕಾಳಜಿ ಹೊಂದಿದ್ದರು. ಆ ಕಾಳಜಿ ಅವರ ವಿಶೇಷ ಲೇಖನಗಳಿಂದಲೇ ತಿಳಿಯುತ್ತದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಉಪಾಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ. ಇಂಥ ಬಹುಮುಖ ಪ್ರತಿಭೆಯನ್ನು ಕಳೆದುಕೊಂಡಿರುವುದು ಕನ್ನಡ ಪತ್ರಿಕೋದ್ಯಮಕ್ಕೆ ಆಗಿರುವ ಅಪಾರ ನಷ್ಟ ಎಂದರೆ ತಪ್ಪಾಗಲಾರದು ಎಂದು ಸಿಎಂ ಹೇಳಿದ್ದಾರೆ.
ದೇವರು ನಾಗರಾಜ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.