ಬೆಂಗಳೂರು: ಹಿರಿಯ ಪತ್ರಕರ್ತ, ರಂಗ ವಿಮರ್ಶಕ ಗುಡಿಹಳ್ಳಿ ನಾಗರಾಜ್ ಅವರ ನಿಧನಕ್ಕೆ ಉನ್ನತ ಶಿಕ್ಷಣ, ಐಟಿ-ಬಿಟ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ನಾಡಿನ ಹೆಸರಾಂತ ದಿನಪತ್ರಿಕೆ ʼಪ್ರಜಾವಾಣಿʼಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಗುಡಿಹಳ್ಳಿ ಅವರು, ನಾಟಕ ರಂಗದಲ್ಲಿ ಬಹು ಪ್ರೀತಿಯಿಂದ ತೊಡಗಿಕೊಂಡಿದ್ದರು. ರಂಗ ವಿಮರ್ಶೆ, ರಂಗ ಬರಹದಲ್ಲಿ ಎತ್ತಿದ ಕೈ ಆಗಿದ್ದ ಅವರು, ಪತ್ರಕರ್ತರಾಗಿದ್ದಾಲೂ, ನಿವೃತ್ತರಾದ ಮೇಲೂ ನಾಟಕ ರಂಗದಲ್ಲಿಯೇ ತೊಡಗಿಕೊಂಡಿದ್ದರು. ಜತೆಗೆ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷರಾಗಿ, ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷರಾಗಿ ಗುಡಿಹಳ್ಳಿ ನಾಗರಾಜ್ ಅವರು ಕ್ರಿಯಾಶೀಲರಾಗಿ ಕೆಲಸ ಮಾಡಿದ್ದರು ಎಂದವರು ಹೇಳಿದ್ದಾರೆ.
ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ಮೃತರಿಗೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಚಿವರು ಪ್ರಾರ್ಥನೆ ಮಾಡಿದ್ದಾರೆ.