ಬೆಂಗಳೂರು: ಕರ್ನಾಟಕದ 25 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರಿಂದ ವಿಧಾನ ಪರಿಷತ್‌ಗೆ ಆಯ್ಕೆ ನಡೆದಿದ್ದು, ಚುನಾವಣೆ ನಡೆದ 25 ಸ್ಥಾನಗಳ ಪೈಕಿ ಬಿಜೆಪಿ 11 ಕಡೆ ಜಯಭೇರಿ ಭಾರಿಸಿದೆ. ಕಾಂಗ್ರೆಸ್ 11 ಸ್ಥಾನಗಳನ್ನು ಜಯಿಸಿದರೆ, ಜೆಡಿಎಸ್ 2 ಸ್ಥಾನ ಗೆದ್ದಿದೆ. ಒಂದು ಸ್ಥಾನ ಪಕ್ಷೇತರರ ಪಾಲಾಗಿದೆ.