ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 27 ಫೆಬ್ರವರಿಯಿಂದ ಮಾರ್ಚ್ 02 ರವರೆಗೆ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಚಾಲನೆ ನೀಡಿದರು.
ಬೆಂಗಳೂರಿನ ದಾಸಪ್ಪ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಶ್ರೀ ರಾಕೇಶ್ ಸಿಂಗ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಉದಯ್ ಗರುಡಾಚಾರ್, ಮುಖ್ಯಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಉಪಸ್ಥಿತರಿದ್ದರು.